ಬೈಂದೂರು : ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ “ಅಭಿಯಾನವನ್ನು ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟೆಹೊಳೆ, ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ. ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ. ಸ್ಥಳೀಯ ಸಂಘ ಸಂಸ್ಥೆಗಳು ಸಾಹಸ್ NGO ಅವರ ಸ್ವಚ್ಛ ಕರಾವಳಿ ಮಿಷನ್ ಯೋಜನೆ (ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್, CSR ಬೆಂಬಲದೊಂದಿಗೆ ) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು ಮತ್ತು ಆಟೋ ನಿಲ್ದಾಣದ ಚಾಲಕರುಗಳಿಗೆ ತ್ಯಾಜ್ಯ ನಿರ್ವಹಣೆಯ ಕರಪತ್ರ ಜೊತೆಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ನ ಸ್ವಚ್ಛತೆಯಲ್ಲಿ ಸಾರ್ವಜನಿಕರ ಮಹತ್ವದ ಕುರಿತು ತಿಳಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪಟಗಾರ್ ಅವರು ಮಾತನಾಡಿ, ಮರವಂತೆ ಪಂಚಾಯತ್ ವತಿಯಿಂದ ಸ್ವಚ್ಛ ಮರವಂತೆ ಸುಂದರ ಮರುವಂತೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಶಾಸಕರ ಮುಖಾಂತರ ಚಾಲನೆಯನ್ನು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಮನೆಗೂ, ಪ್ರತಿಯೊಂದು ಅಂಗಡಿ ಮುಂಗಟುಗಳಿಗೂ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವಲ್ಲಿ ಗ್ರಾಮ ಪಂಚಾಯತ್ ಮರವಂತೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಜ್ಜಾಗಿದೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ಅಮೂಲ್ಯವಾದ ಎಂದರು.
ಸಾಹಸ್ NGO ಅವರ ಸ್ವಚ್ಛ ಕರಾವಳಿ ಮಿಷನ್ ಯೋಜನೆ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್, CSR ಬೆಂಬಲದೊಂದಿಗೆ ಸ್ವಚ್ಛತೆ ಬ್ಯಾನರನ್ನು ಹಿಡಿದುಕೊಂಡು ಪ್ರತಿಯೊಂದು ಅಂಗಡಿ ಮುಂಗಟುಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪಟ್ಗಾರ್, ಸಾಹಸ್ ಸಂಸ್ಥೆಯ ಭವಿತ್,ಸುರೇಶ್,ಸಂದೀಪ್, ಸರೋಜಾ, ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಪ್ರತಿನಿಧಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.

