ಬೆಂಗಳೂರು: ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬಾತ ಮಹಿಳೆ ಮುಂದೆ ಅಸಭ್ಯ ವರ್ತನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಅಸಭ್ಯ ವರ್ತನೆ ತೋರಿದ್ದಾನೆಂದು ಮಹಿಳೆ ದೂರು ನೀಡಿದ್ದಾರೆ. ಈ ಘಟನೆ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್ಫಾರ್ಮ್ನಲ್ಲಿ ನಡೆದಿದೆ. ಮೆಟ್ರೋ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಪ್ಲಾಟ್‌ಫಾರಂನ ಎದುರು ಭಾಗದಲ್ಲಿ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಕೆಲವು ಸನ್ನೆಗಳನ್ನು ಮಾಡುತ್ತ ನಿರಂತರವಾಗಿ ನನ್ನನ್ನು ದಿಟ್ಟಿಸಿ ನೋಡುತ್ತಿರುವ ಅನುಭವವಾಗಿದೆ ಎಂದು ಮಹಿಳೆ ದೂರಿದ್ದಾರೆ. ಈ ಘಟನೆ ತುಂಬಾ ಕೆಟ್ಟದ್ದಾಗಿತ್ತು. ನಾನು ಆತನನ್ನು ಪ್ರಶ್ನೆ ಮಾಡಿದೆ. ಆದರೆ ಆತ ಕೆಲವು ಸನ್ನೆಗಳನ್ನು ಮಾಡುವ ಮೂಲಕ ನನ್ನನ್ನು ದಿಟ್ಟಿಸಿ ನೋಡುತ್ತಲೇ ಇದ್ದ. ನಾನು ವಿಡಿಯೋ ಮಾಡಲು ಆರಂಭಿಸಿದಾಗ ಆತ ಹೋದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.