ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಮ್. ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮುತ್ಸದ್ಧಿ ರಾಜಕಾರಣಿ ಕೃಷ್ಣ ಅವರಿಗೆ ಈಗ ತೊಂಬತ್ತೊಂದರ ವಯಸ್ಸು; ಹಾಗಾಗಿ ಆಗಾಗ ವಯೋ ಸಹಜ ಖಾಯಿಲೆಗಳು ಅವರನ್ನು ಬಿಟ್ಟೂ-ಬಿಡದೆ ಬಾಧಿಸುತ್ತಿದೆ. ಇದೇ ತಿಂಗಳ ಇಪ್ಪತ್ತೆರಡನೇ ತಾರೀಖು ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ, ವಿಠ್ಠಲ್ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಕಾಲಕ್ಕೆ ಚಿಕಿತ್ಸೆ ಪಡೆದು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ವ್ಯೆತ್ಯಾಸಗೊಂಡು ಆಸ್ಪತ್ರೆ ಸೇರಿಕೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಶೀಘ್ರ ಗತಿಯಲ್ಲಿ ಸುಧಾರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.