ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆದು, 20 ಬಾಲಕಿಯರನ್ನು ರಕ್ಷಿಸಲಾಗಿದೆ.
ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾದ 20 ಬಾಲಕಿಯರನ್ನು ರಕ್ಷಿಸಲಾಗಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್ಐಆರ್ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಮನವಿ ಮಾಡಿದ್ದಾರೆ.
ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.