ಮಂಗಳೂರು: ಪಾಪಿಯೊಬ್ಬ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಜಿಲ್ಲೆಯಲ ಕಡಬದಲ್ಲಿ ನಡೆದಿದೆ.
ಕೇರಳ ಮೂಲದ ಅಬೀನ್ ಎಂಬ ವ್ಯಕ್ತಿಯೇ ಈ ಕಿರಾತಕ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿ.ಬಿ, ಅರ್ಚನಾ ಹಾಗೂ ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಕಡಬ ಸರ್ಕಾರಿ ಶಾಲೆಯಲ್ಲಿ ಘಟನೆ ನಡದಿದ್ದು, ಆರೋಪಿ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಆ್ಯಸಿಡ್ ದಾಳಿಗೊಳಗಾದ ಮೂವರು ವಿದ್ಯಾರ್ಥಿನಿಯರಿಗೆ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯರು ತಯಾರಿ ನಡೆಸುತ್ತಿದ್ದ ವೇಳೆ ಆಸಿಡ್ ದಾಳಿ ನಡೆದಿದ್ದು, ಮುಖಕ್ಕೆ ಗಂಭೀರ ಗಾಯಗಳಾಗಿವೆ. ದಾಳಿ ನಡೆಸಿದ ಅಬೀನ್ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಅಲ್ಲಿದ್ದ ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.