ಪ್ರಸಕ್ತ ಸಾಲಿನ ಐಪಿಎಲ್ ನ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.
ಈ ಮೂಲಕ ಅವರು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಫೋರ್ ಹಾಗೂ 3 ಸಿಕ್ಸರ್ ಗಳೊಂದಿಗೆ 49 ರನ್ ಗಳಿಸಿದ್ದರು. ಈ ಮೂಲಕ ಅವರು ಡೆಲ್ಲಿ ವಿರುದ್ಧ 1 ಸಾವಿರ ರನ್ ಕಲೆ ಹಾಕಿದ್ದಾರೆ. ಅಲ್ಲದೇ, ವಿರಾಟ್ ಕೊಹ್ಲಿ ನಂತರ ಈ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 3 ಸಿಕ್ಸ್ನೊಂದಿಗೆ ಐಪಿಎಲ್ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಯಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಹಿತ್ 49 ಸಿಕ್ಸರ್ ಸಿಡಿಸಿದ್ದಾರೆ.
ಪಂದ್ಯದಲ್ಲಿ ಒಟ್ಟು 9 ಬೌಂಡರಿ ಸಿಡಿಸಿ ಟಿ20 ಸ್ವರೂಪದಲ್ಲಿ 1500 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಕೂಡ ರೋಹಿತ್ ಪ್ರಮುಖ ಪಾತ್ರ ವಹಿಸಿದ್ದು, ಟಿ20 ಕ್ರಿಕೆಟ್ನಲ್ಲಿ 250 ಪಂದ್ಯಗಳ ಗೆಲುವಿನಲ್ಲಿ ಭಾಗಿಯಾದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಗೆ ಸಾಕ್ಷಿಯಾಗಿದ್ದಾರೆ.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್ ಗಳನ್ನು ಹಿಡಿದ 4ನೇ ಫೀಲ್ಡರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ 110 ಕ್ಯಾಚ್ ಹಿಡಿದಿರುವ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ.