ಜೈಪುರ: ಪ್ರಧಾನಿ ಮೋದಿ ಪೊಳ್ಳು ಜಗತ್ತಿನಲ್ಲಿ ಬದುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ನಡೆದ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರಿಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಾಗಿದೆ. ಎಲ್ಲ ವಿಪಕ್ಷಗಳ ಮೇಲೆ ದಾಳಿ ನಡೆಯುತ್ತಿವೆ. ಈಗಾಗಲೇ ಇಬ್ಬರು ಮುಖ್ಯಮಂತ್ರಿಗಳು ಜೈಲಿನಲ್ಲಿದ್ದಾರೆ. ಮೋದಿ ಭ್ರಷ್ಟಾಚಾರದ ಮೇಲೆ ದಾಳಿ ನಡೆಸಿ, ಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೆಳೆಯುತ್ತಿದೆ. ಹೀಗಾಗಿ ಮತದಾರರು ಈ ದೇಶದ ಪ್ರಜಾಪ್ರಭುತ್ವ ಉಳಿಸಬೇಕಿದೆ ಎಂದು ಹೇಳಿದ್ದಾರೆ.
45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆಯನ್ನು ದೇಶ ಎದುರಿಸುತ್ತಿದೆ. ಆದರೆ, ಬಿಜೆಪಿ ಭರವಸೆ ಈಡೇರಿಸುವ ಕಾರ್ಯ ಮಾಡುತ್ತಿಲ್ಲ. ಎಲ್ಲೆಡೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಹಣದುಬ್ಬರದ ಪರಿಸ್ಥಿತಿ ಹೇಗಿದೆಯೆಂದರೆ ಚುನಾವಣೆ ಬರುವ ಎರಡು ತಿಂಗಳ ಮುಂಚೆ ಗ್ಯಾಸ್ ಸಿಲಿಂಡರ್ ಬೆಲೆ ಅಗ್ಗ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಏನು ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚಿರಂಜೀವಿ ಸ್ಕೀಮ್ ನಿಲ್ಲಿಸಲಾಯಿತು. ಬಂಡವಾಳಶಾಹಿಗಳ ಸಾವಿರಾರು ಕೋಟಿ ಸಾಲ ಮನ್ನಾ ಆದರೆ 10,000 ಸಾಲಕ್ಕಾಗಿ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದುರ್ಬಲರು, ಕೂಲಿಕಾರ್ಮಿಕರು, ಬಡವರನ್ನು ಯಾರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.