ಬೀದರ್: ರಾಜ್ಯಾದ್ಯಂತ ರಸಗೊಬ್ಬರ ಕೊರತೆಯಾಗುತ್ತಿರುವ ವಿಚಾರವಾಗಿ ಬೀದರ್ ಜಿಲ್ಲೆಯಾದ್ಯಂತ ಬಿಜೆಪಿ ಮುಖಂಡರಿಂದ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಈಶ್ವರ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಜನವಾಡ ಗ್ರಾಮದದಲ್ಲಿರುವ ಬೀದರ್-ಔರಾದ್ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ರೈತರಿಗೆ ಸಕಾಲದಲ್ಲಿ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ರಸ್ತೆ ತಡೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.