ಬಾಗಲಕೋಟೆ: ಇಂದು ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲೆಯ ಮೂಲತಃ ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, ಸಂತಸ ಹಂಚಿಕೊಂಡಿದ್ದಾರೆ.
ಪ್ರಥಮ ಸ್ಥಾನ ಬಂದಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ನನಗೆ ಯಾವುದೇ ಒತ್ತಡ ಇರಲಿಲ್ಲ. ನಮ್ಮ ಕುಟುಂಬಸ್ಥರು ಯಾವುದೇ ಒತ್ತಡ ಹಾಕಲಿಲ್ಲ. ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಳ್ಳುವ ಆಸೆ ಇದೆ. IAS ಅಧಿಕಾರಿಯಾಗುವ ಕನಸು ಹೊಂದಿದ್ದೇನೆ. ಹಾಸ್ಟೇಲ್ ನಲ್ಲಿ ಇದ್ದ ಹಿನ್ನೆಲೆಯಲ್ಲಿ ಮೊಬೈಲ್ ಬಳಕೆ ಇರಲಿಲ್ಲ ಎಂದು ವಿದ್ಯಾರ್ಥಿನಿ ಸಂತಸ ವ್ಯಕ್ತಪಡಿಸಿದ್ದಾಳೆ.