ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಅಂತಿಮ ಘಟ್ಟ ತಲುಪುತ್ತಿದೆ. ನಾನಾ ನಾಯಕರು ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. ಅದೇ ರೀತಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳ ಪರ ಮತಯಾಚನೆಗೆ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಬರಲಿದ್ದಾರೆ.
ಮೊದಲಿಗೆ ಮಧ್ಯಾಹ್ನ ಹನ್ನೆರಡು ಘಂಟೆಗೆ (12) ಶಿವಮೊಗ್ಗಕ್ಕೆ ಬಂದಿಳಿವ ರಾಹುಲ್, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮುಂದೆ ಎರಡೂ ಮೂವತ್ತಕ್ಕೆ (2:30) ರಾಯಚೂರಿಗೆ ತೆರಳಿ ಅಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್ಸಿನಲ್ಲಿ ಪ್ರಬಲ ನಾಯಕನೇ ಇಲ್ಲ; ಇನ್ನು ದೇಶ ಹೇಗೆ ಆಳುತ್ತಾರೆ? ಎಂಬ ಬಿಜೆಪಿಗರ ಪ್ರಶ್ನೆಗೆ, ರಾಹುಲ್ ಗಾಂಧಿ ಕಡೆಯಿಂದ ತೀಕ್ಷ್ಣ ಪ್ರತಿಕ್ರೀಯೆ ನಿರೀಕ್ಷಿಸಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹೇಗೆ ತಿರುಗಿಬೀಳಲಿದ್ದಾರೆ ಮತ್ತು ಪ್ರಸ್ತುತ ಪೆನ್ ಡ್ರೈವ್ ಪ್ರಕರಣವನ್ನು ಹೇಗೆ ಎಳೆದು ತರಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.