ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆಗೆ ಇಂದಿನಿಂದ ಚಾಲನೆ ಸಿಕ್ಕಿದೆ.
ರಾಜ್ಯದಲ್ಲಿ ಲೋಕಸಭೆಗೆ ನಡೆಯುವ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಬಹುದು. ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ.
ಒಟ್ಟು 14 ಕ್ಷೇತ್ರದಲ್ಲಿ ಮೇ 7ಕ್ಕೆ ಮತದಾನ ನಡೆಯಲಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲುಬರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತಾನ ನಡೆಯಲಿದೆ. ಹೀಗಾಗಿ ಈ ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಪತ್ರ ಸಲ್ಲಿಕೆ ಮಾಡಬಹುದು.