ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೊಡಗು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇದ್ದು. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ. ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.