ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಏ. 18ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ನಾಲ್ಕೈದು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.