ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಎಸ್ ಡಿಆರ್ ಎಫ್ ಅಡಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ಎಸ್‌ಡಿಆರ್‌ಎಫ್ ಅಡಿ 697 ಕೋಟಿ ರೂ. ನೀಡಲಾಗಿದೆ. ಈ ಹಣವನ್ನು ಬರಕ್ಕೂ ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಎಸ್‌ಡಿಆರ್‌ಎಫ್ ಅಡಿ 929.60 ಅನುದಾನ ಇದೆ. ಇದರಲ್ಲಿ 697 ಕೋಟಿ ಕೇಂದ್ರ ಪಾಲನ್ನು ಎರಡು ಕಂತುಗಳಲ್ಲಿ ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಇದರಲ್ಲೇ ಬರ ಪರಿಹಾರಕ್ಕೂ ಅನುದಾನ ಬಳಸಿಕೊಳ್ಳಲು ಅವಕಾಶ ಇದೆ ಎಂದು ಹೇಳಿದ್ದಾರೆ.
ತೆರಿಗೆ ಹಂಚಿಕೆ ಕಳೆದ ಮಾರ್ಚ್ ವರೆಗೆ ಪೂರ್ಣ ಕೊಡಲಾಗಿದೆ. ನಾಲ್ಕು ಪಟ್ಟು ಹೆಚ್ಚು ಈ ರಾಜ್ಯಕ್ಕೆ ನೀಡಲಾಗಿದೆ. 15ನೇ ಹಣಕಾಸು ಆಯೋಗ ತನ್ನ ಮಧ್ಯಂತರ ವರದಿಯಲ್ಲಿ 5495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂತ ಶಿಫಾರಸ್ಸು ಮಾಡಿತ್ತು. ಆದರೆ, ಅಂತಿಮ ವರದಿಯಲ್ಲಿ ಆ ಶಿಫಾರಸು ಇರಲಿಲ್ಲ. ಹೀಗಾಗಿ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
6 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಅಂತಾರೆ. ಆದರೆ ಅದು ಸುಳ್ಳು. ಈಗಾಗಲೇ ರಾಜ್ಯಕ್ಕೆ ಕೇಂದ್ರ ಸರ್ಕಾರವು, 8,035.09 ಕೋಟಿ ಬಡ್ಡಿ ರಹಿತ ಸಾಲ ನೀಡಿದೆ. ಆದರೆ, ಇದನ್ನು ಕಾಂಗ್ರೆಸ್ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.