ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರವಷ್ಟೇ ರಾಜ್ಯದ ಹಲವೆಡೆ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು, ಈಗ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದೆ. ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆಯೂ ಎನ್ ಐಎ ಗಮನ ಹರಿಸಿದೆ.
ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು ಎಂಬ ನಿಟ್ಟಿನಲ್ಲಿ ಎನ್ ಐಎ ಅಧಿಕಾರಿಗಳು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದೆ.