ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ ಆರೋಪದ ಕುರಿತು ಮಹದೇವಪುರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಫಕೀರಪ್ಪ ಹಟ್ಟಿ ವಶಕ್ಕೆ ಪಡೆಯಲು ಡಿಸಿಪಿಗೆ ಸೂಚನೆ ನೀಡಿದ ಕೋರ್ಟ್, 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಮನೆ ಖಾಲಿ ಮಾಡಿಸುವ ವಿಚಾರದಲ್ಲಿ ಠಾಣೆಗೆ ತೆರಳಿದ್ದ ವೇಳೆ ಮಹದೇವಪುರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಂತ್ರಸ್ತೆ ಪರಿಚಯ ಮಾಡಿಕೊಂಡಿದ್ದ. ನಂತರ ವಿವಾಹವಾಗುವುದಾಗಿ ನಂಬಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಆಯುಕ್ತರ ಗಮನಕ್ಕೆ ತಂದರೂ ದಾಖಲಾಗಿರಲಿಲ್ಲ.
ನಂತರ ಕೋರ್ಟ್ಗೆ ಸಂತ್ರಸ್ತೆ ಖಾಸಗಿ ದೂರು ದಾಖಲಿಸಿದ್ದಳು. ಈ ಹಿನ್ನೆಲೆಯಲ್ಲಿ ಆತನಿಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು. ನಂತರ ಸೆಷನ್ಸ್ ಕೋರ್ಟ್ ಆರೋಪಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು. ಸದ್ಯ ಕೋರ್ಟ್ ಆರೋಪಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ, ಆತನ ವಿರುದ್ಧ ಎಪ್ ಐಆರ್ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ.