ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೇವಣ್ಣ ಈಗ ಪರಪ್ಪನ ಅಗ್ರಹಾರ ಸೇರಿದ್ದಾರೆ.
ರೇವಣ್ಣ ಅವರು ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯನ್ನು ಕೂಡ 17ನೇ ಎಸಿಎಂಎಂ ಕೋರ್ಟ್ ಪರಿಶೀಲಿಸಿ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸದ್ಯ ಅಧಿಕಾರಿಗಳು ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ (HD Revanna prisoner No) ನೀಡಿದ್ದಾರೆ. ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆ ರೇವಣ್ಣ ವಿಚಾರಣಾಧೀನ ಬಂಧಿ ನಂಬರ್ 4567 (HD Revanna prisoner No 4567) ನೀಡಲಾಗಿದ್ದು, ರೇವಣ್ಣ 7 ದಿನ ಜೈಲಿನಲ್ಲಿಯೇ ಉಳಿಯುವಂತಾಗಿದೆ.