ಮಂಗಳೂರು: ಇಲ್ಲಿಯ ಮೆಡಿಕಲ್ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ನಿಂದ ಚಿತ್ರೀಕರಣ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಇಲ್ಲಿಯ ಬಾವುಟಗುಡ್ಡೆಯಲ್ಲಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಮೆಡಿಕಲ್ ಕಾಲೇಜಿಗೆ ರೋಗಿ ನೆಪದಲ್ಲಿ ಬಂದಿದ್ದ ಅಪ್ರಾಪ್ತ, ನಂತರ ಅಲ್ಲಿಯೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ಸ್ವಲ್ಪ ಹೊತ್ತಿನಲ್ಲಿಯೇ ಅದು ರಿಂಗ್ ಆಗಿದೆ.
ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ. ಆದರೆ, ಮೊಬೈಲ್ ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎನ್ನಲಾಗಿದೆ. ಈ ಕುರಿತು ಬಂದರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದಾಗ ಅಪ್ರಾಪ್ತ ಇಟ್ಟಿರುವುದು ಬೆಳಕಿಗೆ ಬಂದಿದೆ.