ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಾನು ತಿರಸ್ಕರಿಸಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ‘ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನನಗೆ ನೀಡಿದ್ದರು. ಆದರೆ, ನಾನು ಒಂದು ವಾರ ವಿಚಾರ ಮಾಡಿ ನನ್ನ ಆಯ್ಕೆ ತಿಳಿಸಿದ್ದೇನೆ. ಪಕ್ಷ ಕೂಡ ಒಪ್ಪಿಕೊಂಡಿದೆ. ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ , ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕನ್ಸಾಲಿಡೇಟೆಡ್ ಫಂಡ್ ಅಲ್ಲ. ದೇಶದಲ್ಲಿ ಏ. 19ರಿಂದ ಆರಂಭವಾಗಲಿರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಲವು ರಾಜ್ಯಸಭಾ ಸದಸ್ಯರನ್ನು ಕಣಕ್ಕೆ ಇಳಿಸಿದೆ. ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಒಬ್ಬರು. ನಿರ್ಮಲಾ ಸೀತಾರಾಮನ್ ಕೂಡ ಚುನಾವಣೆಗೆ ಸ್ಪರ್ಧಿಸಬೇಕಿತ್ತು. ಆದರೆ, ಅವರು ತಿರಸ್ಕರಿಸಿದ್ದಾರೆ.