ತುಮಕೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕ ವಸತಿ ನಿಲಯ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿನ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ 15 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಲ್ಲಿನ ಎಲ್ಲ ವಸ್ತುಗಳು ವಿದ್ಯಾರ್ಥಿಗಳ ಪುಸ್ತಕಗಳು, ಬಟ್ಟೆ, ಬೆಡ್, ಫ್ಯಾನ್ ಸೇರಿದಂತೆ ಎಲ್ಲ ವಸ್ತುಗಳು ಸುಟ್ಟು ಹೋಗಿವೆ.
ಈ ಘಟನೆ ಮಧ್ಯರಾತ್ರಿ 1 ರ ವೇಳೆಗೆ ನಡೆದಿದೆ. ಕೂಡಲೇ ವಿದ್ಯಾರ್ಥಿಗಳು ಕೋಣೆಯಿಂದ ಹೊರಗಡೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ವೈ.ಎನ್. ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.