ರಾಜಸ್ಥಾನ: ಪೊಲೀಸ್ ಅಧಿಕಾರಿಯ ಮಗನೊಬ್ಬ ಬ್ಯಾಟ್ ನಿಂದ ಹೊಡೆದು ಪೊಲೀಸ್ ತರಕಾರಿ ವ್ಯಾಪಾರಿಯನ್ನು ಕೊಲೆ ಮಾಡಿರುವ ಘಟನೆ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ಕೊಲೆ ಮಾಡಿದ ನಂತರ ದುಷ್ಕರ್ಮಿಯೇ ಶವವನ್ನು ಕಾರಿನಲ್ಲಿ ಇರಿಸಿಕೊಂಡು ಆಸ್ಪತ್ರೆಗೆ ತೆರಳಿದ್ದಾನೆ ಎಂದು ವರದಿಯಾಗಿದೆ. ಘಟನೆಯು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಬ್ಯಾಟ್ ಹಿಡಿದು ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ನಂತರ, ಆರೋಪಿಯ ಕುಟುಂಬದ ಸದಸ್ಯರು ಗಾಯಗೊಂಡ ಯುವಕನನ್ನು ಕಾರಿನಲ್ಲಿ ಇರಿಸಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ವ್ಯಾಪಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.