ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇಲ್ಲಿಯವರೆಗೆ ಅಂದರೆ ಈ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿವೆ. ಈ ಅವಧಿಯಲ್ಲಿ ಬರೋಬ್ಬರಿ 200 ಕೋಟಿ ಮಹಿಳೆಯರು ಸಂಚಾರ ನಡೆಸಿದ್ದಾರೆ.
ಶಕ್ತಿ ಯೋಜನೆ ಜಾರಿಯಾದಾಗಿನಿಂದ ಏಪ್ರಿಲ್ ಅಂತ್ಯದವರೆಗೆ ಒಟ್ಟು 348.97 ಕೋಟಿ ಜನರು ಪ್ರಯಾಣಿಸಿದ್ದರು. ಇದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಿದೆ. ಒಟ್ಟು 4,836 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ 100 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರು. ಸದ್ಯ ಈ ಸಂಖ್ಯೆ 200 ಕೋಟಿಗೆ ಏರಿಕೆ ಕಂಡಿದೆ.
ಇತ್ತೀಚೆಗೆ ಬಿಸಿಲಿನ ತಾಪಮಾನದಿಂದಾಗಿ ಮಹಿಳೆಯರ ಪ್ರಯಾಣದ ಸಂಖ್ಯೆ ಕಡಿಮೆಯಾಗಿದೆ. ಬಿಎಂಟಿಸಿ ಬಸ್ ಗಳಲ್ಲಿಯೇ ಹೆಚ್ಚಿನ ಮಹಿಳೆಯರು ಪ್ರಯಾಣಿಸಿದ್ದಾರೆ. ಬಿಎಂಟಿಸಿಯಲ್ಲಿ ಇಲ್ಲಿಯವರೆಗೆ 64 ಕೋಟಿ ಮಹಿಳೆಯರು ಪ್ರಯಾಣಿ ನಡೆಸಿದ್ದಾರೆ. ಒಟ್ಟು 842 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಎಸ್ಆರ್ ಟಿಸಿ ಬಸ್ ನಲ್ಲಿ 61.03 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು 1,844 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಅಲ್ಲದೇ, ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿಯಲ್ಲಿ 47.2 ಕೋಟಿ ಮಹಿಳೆಯರು ಪ್ರಯಾಣಿಸಿದು, 1,844 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಕೆಆರ್ ಟಿಸಿಯಲ್ಲಿ 30 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, 1 ಸಾವಿರ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.