ಐಪಿಎಲ್ ನ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಜೋಸ್ ಬಟ್ಲರ್ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಈ ಶತಕ ಸಿಡಿಸುವುದರ ಮೂಲಕ ಬಟ್ಲರ್ ತಂಡ ಗೆಲ್ಲಿಸುವುದಷ್ಟೇ ಅಲ್ಲ, ಹಲವು ದಾಖಲೆಗಳನ್ನು ಪುಡಿ ಪುಡಿ ಮಾಡಿದ್ದಾರೆ. ಬಟ್ಲರ್ 58 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದರಲ್ಲಿ ನಾಲ್ಕು ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿ ಇವೆ. ಈ ಮೂಲಕ ಅಜೇಯ 100 ರನ್ ಗಳಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ 100ನೇ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. 2022 ರಲ್ಲಿ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು. ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ದಾಖಲೆ ಹಿಂದೆ ಅಜಿಂಕ್ಯ ರಹಾನೆ ಹೆಸರಲ್ಲಿತ್ತು. ಈಗ 11 ಪ್ರಶಸ್ತಿ ಪಡೆದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
100ನೇ ಐಪಿಎಲ್ ಪಂದ್ಯದಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. 2022 ರಲ್ಲಿ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಈ ದಾಖಲೆ ಬರೆದಿದ್ದರು. ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸಂಜು ಸ್ಯಾಮ್ಸನ್ (3389) ಅಗ್ರಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ (2831) ರನ್ ಗಳಿಸಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನ ಏರಿದ್ದಾರೆ. 6 ಶತಕ ಸಿಡಿಸಿ ಗೇಲ್ ಹಾಗೂ ವಿರಾಟ್ ಕೊಹ್ಲಿ 8 ಶತಕ ಸಿಡಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಬಟ್ಲರ್ 6 ಶತಕ ಸಿಡಿಸಿದ್ದಾರೆ.