ನಟಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಬಹುಕಾಲದ ಗೆಳೆಯನ ಜೊತೆ ಅವರು ಮದುವೆಯಾಗಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಮೀರಾ ಹಂಚಿಕೊಂಡಿದ್ದಾರೆ. ಅಲ್ಲದೇ, ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆ ಕುರಿತು ಹೇಳಿದ್ದಾರೆ.
ಕನ್ನಡದ ‘ಅರ್ಜುನ್’ ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಸ್ನೇಹಿತರಿಗೆ ಕಾಕ್ ಟೈಲ್ ಪಾರ್ಟಿ ಆಯೋಜಿಸಿದ್ದರು. ಮಾ. 12ರಂದು ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎಂಬುವವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಭಾಗವಹಿಸಿದ್ದರು.