ದಾವಣೆಗೆರೆ: ಸಾರಿಗೆ ಬಸ್ ಹಾಗೂ ಓಮಿನಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಹತ್ತಿರ ನಡೆದಿದೆ. ಘಟನೆಯಲ್ಲಿ ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30), ಹರಮಘಟ್ಟ ಗ್ರಾಮದ ನಿವಾಸಿ ನಂಜುಂಡಪ್ಪ(83) ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಕ್ಕಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.