ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿರುವ ಆರೋಪ ಕೇಳಿ ಬಂದಿದ್ದು, ಎಬಿವಿಪಿಯಿಂದ ಭಾರೀ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲಿಯೇ ಉನ್ನತ ಶಿಕ್ಷಣ ಇಲಾಖೆ ತಜ್ಞರ ಸಮಿತಿ ರಚನೆ ಮಾಡಿದೆ.
ಔಟ್ ಆಫ್ ಸಿಲಬಸ್ ನ 50ಕ್ಕೂ ಅಧಿಕ ಪ್ರಶ್ನೆಗಳನ್ನು ನೀಡಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದರು. ಹೀಗಾಗಿ ಬೆಂಗಳೂರಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಕಚೇರಿಗೆ ಮುತ್ತಿಗೆ ಹಾಕಲು ಕೂಡ ವಿದ್ಯಾರ್ಥಿಗಳು ಮುಂತಾಗಿದ್ದರು. ಇದರ ಬೆನ್ನಲ್ಲಿಯೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಈ ಕುರಿತು ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಆದೇಶ ಹೊರಡಿಸಿದ್ದಾರೆ. ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ 4 ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚನೆಯಾಗಿದೆ. ಆದಷ್ಟು ಬೇಗ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.
ತಜ್ಞರ ವರದಿ ಬಂದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವ ಭರವಸೆಯನ್ನು ಕೂಡ ಇಲಾಖೆ ನೀಡಿದೆ