ಅಹಮದಾಬಾದ್: ಹಾಸ್ಟೇಲ್ ನಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ.
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಗೆ ನುಗ್ಗಿದ್ದ ಗುಂಪೊಂದು ನಮಾಜ್ ಮಾಡಿದ ಆರೋಪದ ಮೇಲೆ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ.
ಘಟನೆಯಲ್ಲಿ ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆರೋಪಿಗಳನ್ನು ಸದ್ಯದಲ್ಲಿಯೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಹಮದಾಬಾದ್ ಮೂಲದ ಕ್ಯಾಂಪಸ್‌ನಲ್ಲಿ ಯಾವುದೇ ಮಸೀದಿ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಹೀಗಾಗಿ ರಂಜಾನ್ ಸಮಯದಲ್ಲಿ ರಾತ್ರಿ ನೀಡಲಾಗುವ ತರಾವೀಹ್ – ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಜಮಾಯಿಸಿದ್ದರು. ಸ್ವಲ್ಪ ಸಮಯದ ನಂತರ ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಮಾರಕಾಸ್ತ್ರಗಳೊಂದಿಗೆ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದೆ. ಕೊಠಡಿಗಳನ್ನು ಧ್ವಂಸಗೊಳಿಸಿದೆ ಎನ್ನಲಾಗಿದೆ.
ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಒಬ್ಬರು ಮತ್ತು ಆಫ್ರಿಕನ್ ದೇಶಗಳ ಇಬ್ಬರ ಮೇಲೆ ಹಲ್ಲೆ ನಡೆದಿದೆ. ಹಾನಿಗೊಳಗಾದ ಬೈಕ್‌ಗಳು, ಒಡೆದ ಲ್ಯಾಪ್‌ಟಾಪ್‌ಗಳು ಮತ್ತು ಧ್ವಂಸಗೊಂಡ ಕೊಠಡಿಗಳ ದೃಶ್ಯಗಳಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.