ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ನಿಜಾಮುದ್ದಿನ್(44), ಮೃತಪಟ್ಟ ಹೆಡ್ ಕಾನ್ಸ್ಟೇಬಲ್. ಅವರು ಬೇಗೂರು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಆಡುಗೋಡಿ ಪೊಲೀಸ್ ಕ್ವಾಟ್ರರ್ಸ್ ನಲ್ಲಿ ವಾಸವಿದ್ದ ಅವರಲ್ಲಿ ಹಠಾತ್ತನೇ ಇಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಅಲ್ಲೇ ಕುಸಿದುಬಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗ ಮಧ್ಯೆಯೇ ನಿಜಾಮುದ್ದಿನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.