ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ವ್ಹೀಲಿಂಗ್ ಮಾಡುತ್ತಿದ್ದ 6 ಜನ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 13 ಬೈಕ್ ಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ವ್ಹೀಲಿಂಗ್ ಮಾಡುವ ಮೂಲಕ ಇನ್ನಿತರ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ದೃಶ್ಯ ಸೆರೆ ಮಾಡಿಕೊಂಡು ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.