ಬೆಂಗಳೂರು: ಯಲ್ಲಾಪುರದ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಸಾವನ್ನಪ್ಪಿದ(death) ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು(solution) ಸಿಎಂ ಸಿದ್ದರಾಮಯ್ಯ(CM Siddaramaiah) ಘೋಷಿಸಿದ್ದಾರೆ.
ಈ ಕುರಿತು ಟ್ವಿಟರ್ ಮೂಲಕ ಮಾಹಿತಿ ನೀಡಿದ ಅವರು, ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (Yallapur) ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ(Sindhanur) ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಸಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಬರೆದುಕೊಂಡಿದ್ದಾರೆ.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿದ್ದಾರೆ. 25ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತರಕಾರಿ ಲಾರಿ(lorry) ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ 63ರ(National Highway 63) ಗುಳ್ಳಾಪುರ ಘಟ್ಟ ಭಾಗದಲ್ಲಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿದ್ದಾರೆ. 15ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.