ನವದೆಹಲಿ: ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ 10 ಹುದ್ದೆಗಳ ನೇಮಕಾತಿಗಾಗಿ (NMDFC Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಸಹಾಯಕ ವ್ಯವಸ್ಥಾಪಕ, ಕಾರ್ಯನಿರ್ವಾಹಕ ಸಹಾಯಕ ಸ್ಥಾನಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 3ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 2 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಡೆಪ್ಯೂಟಿ ಮ್ಯಾನೇಜರ್- 01
ಅಸಿಸ್ಟಂಟ್ ಮ್ಯಾನೇಜರ್ (ಪ್ರಾಜೆಕ್ಟ್, ಕೋ-ಆರ್ಡಿನೇಷನ್)- 02
ಅಸಿಸ್ಟಂಟ್ ಮ್ಯಾನೇಜರ್ (ಫೈನಾನ್ಸ್ ಆ್ಯಂಡ್ ಅಕೌಂಟ್ಸ್)- 01
ಅಸಿಸ್ಟಂಟ್ ಮ್ಯಾನೇಜರ್ (ಎಚ್ ಆರ್ ಎಂ ಆ್ಯಂಡ್ ಅಡ್ಮಿನ್)- 01
ಎಕ್ಸಿಕ್ಯೂಟಿವ್ ಅಸಿಸ್ಟಂಟ್- 05
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಆನ್ಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು www.nmdfc.org ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಜನರಲ್, ಒಬಿಸಿ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.