ಬೆಳಗಾವಿ: ಪಂಚಮಸಾಲಿ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ಅದು ಅವರ ಹಕ್ಕು. ಆದರೆ, ಅದು ಶಾಂತಿಯಿಂದ ನಡೆಯಬೇಕು. ಮಾತುಕತೆಗೆ 10 ಜನ ಪ್ರಮುಖರನ್ನು ಆಹ್ವಾನಿಸಲಾಗಿತ್ತು. ಆದರೆ, ಅವರು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಭಟನೆ ಮಾಡುವುದು ಅವರ ಹಕ್ಕು. ಅದನ್ನು ಎಂದಿಗೂ ನಾನು ವಿರೋಧಿಸುವುದಿಲ್ಲ. ಆದರೆ, ಅದನ್ನು ಶಾಂತಿಯಿಂದ ಮಾಡಬೇಕು. ಮಾತಕುತೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ಹೇಳಲಾಗಿತ್ತು. ಆದರೆ, ಅವರು ಯಾರೂ ಬರಲಿಲ್ಲ. ಗದ್ದಲ ಎಬ್ಬಿಸಿ ಹೋರಾಟ ಮಾಡುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.
ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ, ಆರು ತಿಂಗಳಿನಿಂದ ಅನಾರೋಗ್ಯದಿಂದ
ಬಳಲುತ್ತಿದ್ದರು. 93ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಸ್ನೇಹಿತರಿಗೆ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಕೊಡಲಿ. ಮೂರು ದಿನ ಶೋಕಾಚರಣೆ ಮಾಡಲು ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.