ಮಂಗಳೂರು :ಪುತ್ತೂರು ತಾಲೂಕಿನ ಪಡವನ್ನೂರು ಗ್ರಾಮದ ಸಂಜಕಾಡಿ ಪ್ರದೇಶದಲ್ಲಿ ಗ್ರಾಮಾಂತರ ಪೊಲೀಸರು ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಶೋಕ್ ಲೈಲಾಂಡ್ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 106 ಕಿಲೋಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ಸುಮಾರು 55 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಚಾರ್ಮಾಡಿ ನಿವಾಸಿಗಳಾದ ರಫೀಕ್ ಮತ್ತು ಅಬ್ದುಲ್ ಸಾದಿಕ್ ಬಂಧಿತ ಆರೋಪಿಗಳು. ಕೇರಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಾಗಾಟ ಮಾಡಲಾಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಮುಂದಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ ಅಂತ್ಯ | ಅಗೆದಷ್ಟು ಸಿಗುತ್ತಿವೆ ಪ್ರಾಚೀನ ಅವಶೇಷಗಳು!



















