ಧಾರವಾಡ: ರಾಜ್ಯದಲ್ಲಿ ಮತ್ತೆ ಕೊರೊನಾ(Corona Virus) ಹಾವಳಿ ಶುರುವಾಗಿದ್ದು, ಮಕ್ಕಳನ್ನೂ ಬಿಡದೆ ವೈರಸ್ ಕಾಡುತ್ತಿದೆ. ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಸೋಂಕು ಈಗ ಬೇರೆ ಬೇರೆ ಜಿಲ್ಲೆಗಳಿಗೂ ಕಾಲಿಡುತ್ತಿದೆ. ಹುಬ್ಬಳ್ಳಿ (Hubballi)ಯಲ್ಲಿ 11 ತಿಂಗಳ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹುಬ್ಬಳ್ಳಿಯ ಬೈರಿದೇವರಕೊಪ್ಪದ 11 ತಿಂಗಳ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವನ್ನು ಹೃದಯ ಸಂಬಂಧಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಕೋವಿಡ್ ಇರುವುದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಕೊರೊನಾ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಬೇಕೆಂದು ತಜ್ಞರು ಹೇಳುತ್ತಿದ್ದಾರೆ.