ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದಿಂದ ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುವವರಿಗೆ ಸುವರ್ಣಾವಕಾಶ ಇಲ್ಲಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,105 ಗ್ರೂಪ್ ಬಿ (ನಾನ್ ಗೆಜೆಟೆಡ್) ಹಾಗೂ ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಹುದ್ದೆ ಪಡೆಯಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ- ಭಾರತೀಯ ನೌಕಾಪಡೆ
ಹುದ್ದೆಗಳು- ಗ್ರೂಪ್ ಬಿ (ನಾನ್ ಗೆಜೆಟೆಡ್) ಹಾಗೂ ಗ್ರೂಪ್ ಸಿ ಸಿವಿಲಿಯನ್ ಪೋಸ್ಟ್ಸ್
ಒಟ್ಟು ಹುದ್ದೆಗಳು- 1,105
ಕೆಲಸದ ಸ್ಥಳ- ದೇಶಾದ್ಯಂತ
ಅರ್ಜಿ ಸಲ್ಲಿಕೆ- ಆನ್ ಲೈನ್
ಗ್ರೂಪ್ ಬಿ (ನಾನ್ ಗೆಜೆಟೆಡ್) ಹಾಗೂ ಗ್ರೂಪ್ ಸಿ ಹುದ್ದೆಗಳಲ್ಲಿ ಚಾರ್ಜ್ ಮ್ಯಾನ್, ಸ್ಟಾಫ್ ನರ್ಸ್, ಟ್ರೇಡ್ಸ್ ಮ್ಯಾನ್ ಮೇಟ್, ಸ್ಟೋರ್ ಕೀಪರ್ ಹಾಗೂ ಡ್ರೈವರ್ ಸೇರಿ ಹಲವು ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.42 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿಗಳ ಪರಿಶೀಲನೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಜುಲೈ 5ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ, ಎಂಜಿನಿಯರಿಂಗ್ ಸೇರಿ ಹಲವು ಕೋರ್ಸ್ ಗಳನ್ನು ಮುಗಿಸಿದವರಿಗೆ ಉತ್ತಮ ಅವಕಾಶಗಳಿವೆ. https://www.joinindiannavy.gov.in/ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



















