ದಾವಣಗೆರೆ : ಜಿಲ್ಲೆಯ ಹರಿಹರ ತಾಲೂಕಿನ ಕುಣೆಬೆಳಕೆರೆ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ಲೋಡ್ ಹುಲ್ಲಿನ ಬಣವೆ ಸಂಪೂರ್ಣ ಭಸ್ಮವಾಗಿದೆ.
ಉಮೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಗ್ರಾಮಸ್ಥರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಮುಖ್ಯ ಶಾಖಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಒಂದು ಲಕ್ಷ ರೂ. ಮೌಲ್ಯದ ಹುಲ್ಲು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್



















