ಬೆಂಗಳೂರು: ಕೇಂದ್ರ ಸರ್ಕಾರಿ ಒಡೆತನದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ನಲ್ಲಿ ಖಾಲಿ ಇರುವ 125 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಮತ್ತು ಟೆಕ್ನಿಷಿಯನ್ ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜೂನ್ 5ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಮಾಹಿತಿ
ನೇಮಕಾತಿ ಸಂಸ್ಥೆ : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಳು: 125
ಹುದ್ದೆಗಳ ಹೆಸರು : ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ, ಟೆಕ್ನಿಷಿಯನ್
ಉದ್ಯೋಗ ಸ್ಥಳ : ಬೆಂಗಳೂರು ಸೇರಿ ದೇಶಾದ್ಯಂತ
ಅರ್ಜಿಯ ಮೋಡ್ : ಆನ್ಲೈನ್
ಅಭ್ಯರ್ಥಿಗಳು ದೇಶದ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಐಟಿಐ, ಪದವಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ ಮೂರು ವರ್ಷ, ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯಸ್ಸಿನ ಸಡಿಲಿಕೆ ಇದೆ. https://www.ecil.co.in/](https://www.ecil.co.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜನರಲ್, ಒಬಿಸಿಯವರಿಗೆ ಒಂದು ಸಾವಿರ ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಟೆಕ್ನಿಷಿಯನ್ ದರ್ಜೆ-II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜನರಲ್, ಒಬಿಸಿಯವರಿಗೆ 750 ರೂ. ಹಾಗೂ ಎಸ್ಸಿ, ಎಸ್ಟಿಯವರಿಗೆ ಶುಲ್ಕದಿಂದ ವಿನಾಯಿತಿ ಇದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 20,480 ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.