ಆನೇಕಲ್: ಇತ್ತೀಚೆಗಷ್ಟೇ ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳು ಅರೆಸ್ಟ್ ಆಗಿರುವ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದ್ದು, ಈಗ ಮತ್ತೆ 14 ಜನ ಅರೆಸ್ಟ್ ಆಗಿದ್ದಾರೆ.
ಬಂಧಿತರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಹೊರ ಬಿದ್ದಿದ್ದು, ಜಿಗಣಿ ಪೊಲೀಸರು ಇದೀಗ ದೇಶದಾದ್ಯಂತ 14 ಜನ ಪಾಕಿಸ್ತಾನಿಯರನ್ನು ಬಂಧಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಪಾಕ್ ಪ್ರಜೆಗಳ ಜಾಲ ಇನ್ನಷ್ಟು ವಿಸ್ತರಿಸಿರುವ ಆತಂಕ ಎದುರಾಗಿದೆ.
14 ಜನರ ಬಂಧನದೊಂದಿಗೆ ದೇಶದಲ್ಲಿ ಜಿಗಣಿ ಹಾಗೂ ಕರ್ನಾಟಕ ಪೊಲೀಸರು ಬಂಧಿಸಿದ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇವರೆಲ್ಲ ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದರು. ಪ್ರಕರಣದ ಕಿಂಗ್ಪಿನ್ ಪರ್ವೇಜ್ ಬಂಧನದ ಬೆನ್ನಲ್ಲೇ ಹಲವರು ಪೊಲೀಸರ ಕೈಯಲ್ಲಿ ಸಿಲುಕಿಕೊಂಡಿದ್ದಾರೆ.