ಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ 14ರ ಬಾಲಕ ದಾಖಲೆಯ ಶತಕ ಸಿಡಿಸಿದ್ದಾರೆ.
ರಾಜಸ್ಥಾನದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಟಿ20 ಐಪಿಎಲ್ ನಲ್ಲಿ ಇತಿಹಾಸ ಬರೆದಿದ್ದಾರೆ.
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ವೇಗದ 2ನೇ ಶತಕ ಸಿಡಿಸಿ ಮಿಂಚಿದ್ದಾರೆ. ಅದೂ 14ನೇ ವಯಸ್ಸಿನಲ್ಲಿ ಎನ್ನುವುದು ವಿಶೇಷವಾಗಿದೆ. ವೈಭವ್ 7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 100 ರನ್ ಸಿಡಿಸಿದ್ದಾರೆ. ಐಪಿಎಲ್ ಹಾಗೂ ಟಿ20 ಕ್ರಿಕೆಟ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನೂ ವೈಭವ್ ಹೊಂದಿದ್ದಾರೆ.



















