ಬೆಳಗಾವಿ: ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ 150 ಕೋಟಿ ರೂ. ಆಮಿಷವೊಡ್ಡಿದ ಆರೋಪ ಮಾಡಿರುವ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಿಎಂ ಹಾಗೂ ಪ್ರಿಯಾಂಕ್ ಖರ್ಗೆ ನನ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಗಮನಿಸಿದರೆ, ಸಿಎಂಗೆ ಸಿಬಿಐ ಮೇಲೆ ವಿಶ್ವಾಸ ಬಂದಂತಾಗಿದೆ. ಹೀಗಾಗಿ ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಿಬಿಐಗೆ ವಹಿಸಲಿ ಎಂದು ಸವಾಲು ಹಾಕಿದರು.
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿಎಂ ಹಿಟ್ ಅಂಡ್ ರನ್ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.