ಹೈದ್ರಾಬಾದ್ : ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಘಟನೆವೊಂದು ನಡೆದಿದ್ದು, ನಾಗರ್ಕರ್ನೂಲ್‌ನಲ್ಲಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದ 16 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾದಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾಳೆ. ನಂತರ ಆಕೆಯ ತಾಯಿ ಅವಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಸ್ಕ್ಯಾನ್ ಮಾಡಿಸಲು ಸೂಚಿಸಿದ್ದರು.
ಸ್ಕ್ಯಾನಿಂಗ್ ಕೇಂದ್ರದಲ್ಲಿ ಕಾಯುತ್ತಿದ್ದಾಗ, ಬಾಲಕಿ ಶೌಚಾಲಯಕ್ಕೆ ತೆರಳಿದ್ದಳು. ಅಲ್ಲಿ ಅವಳು ಮಗುವಿಗೆ ಜನ್ಮ ನೀಡಿದ್ದಾಳೆ. ಅಲ್ಲಿನ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿ ಮತ್ತು ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತರಾಗಿದ್ದು, ಆರೈಕೆಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್ ಸೆಮಿಫೈನಲ್ ಕದನ | ಟಾಸ್ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!



















