ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಾಜೆಕ್ಟ್ಸ್ ಆ್ಯಂಡ್ ಡೆವಲಪ್ ಮೆಂಟ್ ಇಂಡಿಯಾ ಲಿಮಿಟೆಡ್ (PDIL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 87 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರಿಂಗ್ ಮುಗಿಸಿದವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪ್ರಾಜೆಕ್ಟ್ಸ್ ಆ್ಯಂಡ್ ಡೆವಲಪ್ ಮೆಂಟ್ ಇಂಡಿಯಾ ಲಿಮಿಟೆಡ್ (PDIL)
ಖಾಲಿ ಇರುವ ಹುದ್ದೆಗಳು: 87
ಹುದ್ದೆಗಳ ಹೆಸರು: ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 20
ಉದ್ಯೋಗ ಸ್ಥಳ: ದೇಶಾದ್ಯಂತ
ಡಿಪ್ಲೋಮಾ ಎಂಜಿನಿಯರ್ ಹಾಗೂ ಡಿಗ್ರಿ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಿಎಸ್ಸಿ, ಬಿಇ, ಬಿ ಟೆಕ್, ಬಿಸಿಎ, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 59,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯಿರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. 32ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಇದಾದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ pdilin.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ; ಭಾರತೀಯ ವಾಯುಪಡೆಯಲ್ಲಿ 284 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















