ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 394 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಗ್ರೂಪ್ A, B ಮತ್ತು C ಹುದ್ದೆಗಳು ಸೇರಿ ಒಟ್ಟು 394 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದೇ ಆಗಸ್ಟ್ 1ರಿಂದ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್ಸೈಟ್ www.ccras.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಯಾವ ಹುದ್ದೆಗಳ ನೇಮಕ?
ಅಧಿಕಾರಿ, ಸ್ಟಾಫ್ ನರ್ಸ್, ಸಹಾಯಕ, ಅನುವಾದಕ, ಸಂಶೋಧನಾ ಸಹಾಯಕ, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ, ಸಂಖ್ಯಾಶಾಸ್ತ್ರೀಯ ಸಹಾಯಕ, ಔಷಧಿಕಾರ ಮತ್ತು ಭದ್ರತಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಸಡೆಯಲಿದೆ. ಒಟ್ಟಾರೆ 20ರಿಂದ 40ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು ಎಂದು ತಿಳಿಸಲಾಗಿದೆ.
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಎಂಡಿ, ಎಂಎಸ್, ಬಿಎಸ್ಸಿ, ನರ್ಸಿಂಗ್, ಜನರಲ್ ನರ್ಸಿಂಗ್ ನಲ್ಲಿ ಡಿಪ್ಲೋಮಾ, ಸ್ನಾತಕೋತ್ತರ ಪದವಿ ಸೇರಿ ಹಲವು ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 18ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 22 ಸಾವಿರ ರೂಪಾಯಿಯಿಂದ 39 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ.