ಬೀದರ್ : ಹಾಡಹಗಲೇ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಖದೀಮರು ಮನೆ ದರೋಡಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನ ಗಮನಿಸಿದ ಖದೀಮರು ಮನೆಗೆ ನುಗ್ಗಿ ಚಾಕು ಇರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಮಹಿಳೆಯನ್ನು ಹೆದರಿಸಿ ಬೆದರಿ ಮನೆಯಲ್ಲಿ ಇಟ್ಟಿದ್ದ ಬರೋಬ್ಬರಿ 25 ತೊಲ ಚಿನ್ನಾಭರಣ, ಸುಮಾರು 4 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಠಾ (ಬಿ) ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಮಹಿಳೆಯು ಒಂಟಿಯಾಗಿರುವುದನ್ನು ಗಮನಿಸಿದ ಖದೀಮರಿಬ್ಬರು, ಮನೆಯ ಹಿಂಬಾಗಿಲಿನಿಂದ ಬಂದು ಮಹಿಳೆಗೆ ಚಾಕುವಿನಿಂದ ಇರಿದು ಹೆದರಿಸಿ, ಹಲ್ಲೆ ಮಾಡಿ ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಪ್ರೀತಿ ಓಂಕಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಿಳೆಯ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ಕೈಗೆತ್ತಿಕೊಂಡಿದ್ದಾರೆ.