ಹಾವೇರಿ: ಯುವತಿಯೊಬ್ಬಳು ಪಾರ್ಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಣೇಬೆನ್ನೂರು (Ranebennur) ಪಟ್ಟಣದ ಕೇಂಬ್ರಿಡ್ಜ್ ಶಾಲೆ ಹತ್ತಿರವಿದ್ದ ಪಾರ್ಕ್ ನಲ್ಲಿ ಇಂಜಿನಿಯರ್ ಸಂಜನಾ(28) ಹಾಡಹಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ದುಪ್ಪಟ್ಟಾದಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸಾವನ್ನಪ್ಪಿರುವ ಸಂಜನಾ ಇಂಜಿನಿಯರ್ ಆಗಿದ್ದು, ಕೆಲಸ ಮಾಡುತ್ತಿದ್ದರು. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















