ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಎಸ್. ಉಮೇಶ್ ಇಹಲೋಕ ತ್ಯಜಿಸಿದ್ದಾರೆ.
ಎಸ್. ಉಮೇಶ್ ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಂದನವನದಲ್ಲಿ ಹಲವಾರು ಯಶಸ್ವಿ ಚಿತ್ರಗಳನ್ನು ನೀಡಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಎಸ್.ಉಮೇಶ್ (Director S Umesh) ನಿಧನ ಹೊಂದಿದ್ದಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಚಿಕಿತ್ಸೆ ಫಲಕಾರಿಯಾಗದೆ ಇಂದು (ಫೆ.21) ನಿಧನ ಹೊಂದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.
ಕನ್ನಡ ಚಿತ್ರರಂಗರಲ್ಲಿ (Kannada Film Industry) ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದ ಉಮೇಶ್, ‘ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’, ‘ಅವಳೆ ನನ್ನ ಹೆಂಡ್ತಿ’, ಎಲ್ಲರಂಥಲ್ಲ ನನ್ನ ಗಂಡ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.