ಬೆಳಗಾವಿಯಲ್ಲಿ ಕಾಂಗ್ರೆಸ್ ನ (Indian National Congress) ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧೀಜಿ (Mahatma Gandhiji) ವಹಿಸಿ ಶತಮಾನ ಕಳೆದ ಹಿನ್ನೆಲೆಯಲ್ಲಿ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಿಳೆಯರನ್ನು ತಳ್ಳಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್ ಮೂಲಕ ಹಂಚಿಕೊಂಡು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಹಂಚಿಕೊಂಡಿರುವ ಅವರು, ಇದು ಕಾಂಗ್ರೆಸ್ ನ ಮಹಿಳಾ ಸಬಲೀಕರಣದ ಕಲ್ಪನೆ. ಈ ವಿಡಿಯೋದಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಿಳಾ ಕಾರ್ಯಕರ್ತರನ್ನು ದನಗಳಂತೆ ದೂಡುತ್ತಿರುವುದನ್ನು ಕಾಣಬಹುದು. ಇದು ನಾಚಿಕೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿ ಬರೆದುಕೊಂಡಿದ್ದಾರೆ. ಆದರೆ, ಇದುವರೆಗೂ ಈ ವಿಡಿಯೋ ಬಗ್ಗೆ ಡಿಕೆಶಿಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.