ಚಿಕ್ಕಮಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ಬಸವ ತತ್ವ ಕಾರ್ಯಕ್ರಮ ಮುಗಿಸಿ ಮರಳಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಲ್ಲದೇ, ಘಟನೆಯಲ್ಲಿ ವಿಜಯೇಂದ್ರ ಕಾರು ಚಾಲಕ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀರೂರು ಮೂಲದ ಹರೀಶ್ ಎಂಬುವರಿಗೆ ಸೇರಿದ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.