ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರನ್ನು ಆಹ್ವಾನಿಸಲಾಗಿದೆ.
ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಈಗಾಗಲೇ ಅಮಿತಾಭ್ ಬಚ್ಚನ್ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಗೆ ನೀಡಿದೆ. ಖುಷಿಯಿಂದಲೇ ಬಚ್ಚನ್ ಆಹ್ವಾನ ಪತ್ರಿಕೆ ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಅಮಿತಾಭ್ ಬಚ್ಚನ್ ಈ ಬಾರಿಯ ಜಾತ್ರೆಗೆ ಮುಖ್ಯ ಅತಿಥಿಯಾಗಿ ಬರುವ ಸಾಧ್ಯತೆ ಎನ್ನಲಾಗುತ್ತಿದೆ.