ಬೆಂಗಳೂರು: ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರವೇ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.
ನೂರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಜಮಾಯಿಸಿ, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಮಲ್ ಹಾಸನ್ ವಿರುದ್ಧ ಘೋಷಣೆ ಕೂಗಿದ್ದಾರೆ. ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಕಮಲ್ ಹಾಸನ್ ನನ್ನು ಗಡಿಪಾರು ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.